ಬೆಂಗಳೂರು: ನಗರದಲ್ಲಿ 2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ಆರೋಪಿ ಶೋಯಿಬ್ ಎಂಬಾತನನ್ನು ಸಿಸಿಬಿ ಪೊಲೀಸರು ಕೇರಳದಲ್ಲಿ ಸೋಮವಾರ ಬಂಧಿಸಿದ್ದಾರೆ.

ಸಿಸಿಬಿಯ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು, ಖಚಿತ ಮಾಹಿತಿ ಮೇರೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದ ಬಳಿಕ ಪರಾರಿಯಾಗಿದ್ದ ಶೋಯಿಬ್, 12 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ.

‘ಸರಣಿ ಬಾಂಬ್ ಸ್ಫೋಟದ ಆರೋಪಿ ಶೋಯಿಬ್ ಬಂಧನಕ್ಕಾಗಿ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಇದೀಗ ಕೇಂದ್ರದ ತನಿಖಾ ತಂಡಗಳ ಸಹಾಯದಿಂದ ಆತನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿಯ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

‘ಇಬ್ಬರು ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಕೇರಳದಲ್ಲಿದ್ದು, ಆರೋಪಿಯನ್ನು ಸದ್ಯದಲ್ಲೇ ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ’ ಎಂದೂ ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.