ಬೆಂಗಳೂರು: ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಅವರ ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದಲ್ಲಿರುವ ಮನೆಯಲ್ಲಿ ಉಳಿದುಕೊಂಡಿದ್ದರು.’

‘ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದ ಸುದರ್ಶನ್, ಕೊಠಡಿಯೊಳಗೆ ಹೋಗಿ ಬಾಗಿಲುಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಕೆಲ ಹೊತ್ತಿನ ನಂತರ ಹೊರಗೆ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಯ್! ನಾನು ಕರ್ನಾಟಕಕ್ಕೆ ಬರುತ್ತಿರುವೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.