ಬೆಂಗಳೂರು: ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ 'ಛೀಮಾರಿ' ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ.

ನಿವೇಶನ ಹಂಚಿಕೆಯಲ್ಲೂ ಅಕ್ರಮ ಎಸಗಿ ಗೃಹ ಸಚಿವರಿಗೆ ಹಾಗೂ ಬಿಜೆಪಿ ಶಾಸಕರಿಗೆ ಬಿಡಿಎ ಮೂಲಕ ಅನುಕೂಲ ಮಾಡಿಕೊಟ್ಟಿತ್ತು ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದೆ.

ಬೆಂಗಳೂರಿನ ಅಭಿವೃದ್ಧಿಗೆ ಗಮನ ಹರಿಸದ ಬಿಡಿಎ, ಬಿಜೆಪಿ ಭ್ರಷ್ಟರ ಜೊತೆ ಸೇರಿ ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಕೆಪಿಸಿಸಿ ಆರೋಪಿಸಿದೆ.

ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದ ಬಡಾವಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರಿಗೆ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಹಂಚಿಕೆ ಮಾಡಿದ್ದ ಬದಲಿ ನಿವೇಶನಗಳನ್ನು ಹಿಂಪಡೆಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಿರುವುದಕ್ಕೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿಗೆ ಒಳಗಾಗಿರುವ ಬಿಡಿಎ, ಅಂತಹ ನಿವೇಶನ ಮಂಜೂರಾತಿಗಳನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ.

ಆರಗ ಜ್ಞಾನೇಂದ್ರ, ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಮುಖಂಡ ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಡಾ.ಎಂ. ನಾಗರಾಜ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.