ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮಾ.14ರಿಂದ ಟೋಲ್ ಸಂಗ್ರಹಿಸುವ ಕಾರ್ಯ ಆರಂಭವಾಗಿದೆ. ಅದರಂತೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ ಹಾಗೂ ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಪ್ಲಾಜಾಗಳಲ್ಲಿ ಟೋಲ್ ಸಿಬ್ಬಂದಿ ಟೋಲ್ ಸಂಗ್ರಹಕ್ಕೆ ಮುಂದಾದರು. ಆದರೆ ಸರಿಯಾದ ಸಿದ್ಧತೆ ಇಲ್ಲದೆ ಈ ಕಾರ್ಯಕ್ಕೆ ಮುಂದಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಅಲ್ಲದೆ, ಟೋಲ್ ಮೊತ್ತ ತುಂಬಾ ಜಾಸ್ತಿಯಾಗಿದೆ ಎಂದೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.