ಬೆಂಗಳೂರು: ಸ್ಥಳೀಯ ಪ್ರತಿಭೆಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಗೆ ತರುವ ಉದ್ದೇಶದ, 27ನೇ ಆವೃತ್ತಿಯ ‘ಬೆಂಗಳೂರು ತಂತ್ರಜ್ಞಾನ ಶೃಂಗದ ಉದ್ಘಾಟನಾ ಸಮಾರಂಭವು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಕೌಶಲ ಅಭಿವೃದ್ಧಿ ತರಬೇತಿ ನೀಡುವ ಒಪ್ಪಂದಗಳಿಗೂ ಸಾಕ್ಷಿಯಾಯಿತು.

40 ದೇಶಗಳ ಸರ್ಕಾರ ಮತ್ತು ಉದ್ಯಮ ವಲಯದ ಪ್ರತಿನಿಧಿಗಳು ಮತ್ತು 150ಕ್ಕೂ ಹೆಚ್ಚು ಜಾಗತಿಕ ಉದ್ಯಮಿಗಳು ಭಾಗಿಯಾಗಿರುವ ಶೃಂಗಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದರು. ವಿದ್ಯಾರ್ಥಿ ಗಳಲ್ಲಿ ಕೌಶಲವನ್ನು ಹೆಚ್ಚಿಸುವ ಸಲುವಾಗಿ ರೂಪಿಸಿರುವ ‘ನಿಪುಣ ಕರ್ನಾಟಕ’ ಕಾರ್ಯಕ್ರಮವನ್ನು ಅವರು ಅನಾವರಣ ಮಾಡಿದರು.

ಈ ಕಾರ್ಯಕ್ರಮದ ಭಾಗವಾಗಿ ವಿಶ್ವದ ಐದು ತಂತ್ರಜ್ಞಾನ ದೈತ್ಯ ಕಂಪನಿಗಳ ಜತೆಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ. ಎಂಜಿನಿಯರಿಂಗ್, ಡಿಪ್ಲೊಮಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚಿಸುವ ಮೂಲಕ, ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಪ್ರತಿ ವರ್ಷ ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮತ್ತು ಅವರಲ್ಲಿ ಕನಿಷ್ಠ ಶೇ 70ರಷ್ಟು ಮಂದಿಗೆ ಉದ್ಯೋಗ ನೀಡುವ ಗುರಿಯನ್ನು ಇವು ಒಳಗೊಂಡಿವೆ.

ಮೈಕ್ರೊಸಾಫ್ಟ್ ಕಂಪನಿಯು ಡೀಪ್ ಟೆಕ್ ಕ್ಷೇತ್ರದಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ, ಇಂಟೆಲ್ ಕಂಪನಿಯು ಕೃತಕ ಬುದ್ಧಿಮತೆ ಕ್ಷೇತ್ರದಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ, ಅಕ್ಸೆಂಚರ್ ಕಂಪನಿಯು ಸೈಬರ್ ಭದ್ರತೆ ಮತ್ತು ಕ್ವಾಂಟಂ ಕಂಪ್ಯೂಟಿಂಗ್ ವಿಭಾಗದಲ್ಲಿ 10 ಸಾವಿರ ವಿದ್ಯಾರ್ಥಿಗಳಿಗೆ, ಬಿಎಫ್ಎಸ್ಐ ಕನ್ಸಾರ್ಟಿಯಂ ಕಂಪನಿಯು ಫಿನ್ಟೆಕ್ ಕ್ಷೇತ್ರದಲ್ಲಿ ವರ್ಷಕ್ಕೆ 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಒಪ್ಪಿಕೊಂಡಿವೆ. ಎಐ ಮತ್ತು ಕ್ಲೌಡ್ ಕಂಪ್ಯೂಟಿಂಗ್ಗೆ ಸಂಬಂಧಿಸಿದಂತೆ ಪ್ರತಿ ವರ್ಷ 50 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಐಬಿಎಂ ಒಪ್ಪಂದ ಮಾಡಿಕೊಂಡಿದೆ.

ನವೋದ್ಯಮಗಳು ಮತ್ತು ಹೂಡಿಕೆದಾರರು: ಉತ್ತಮ ಸಾಧನೆ ಮಾಡಿರುವ ರಾಜ್ಯದ ನವೋದ್ಯಮಗಳನ್ನು ಪ್ರಶಂಸಿಸುವ ಕಾರ್ಯಕ್ರಮವನ್ನೂ ಶಂಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸ್ವಿಗ್ಗಿ ಸಹಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೇತಿ ಮತ್ತು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಅವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.

ಶೃಂಗಸಭೆಯ ಭಾಗವಾಗಿ ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆ ವೇದಿಕೆಗಳಲ್ಲಿ ನವೋದ್ಯಮಗಳ ಪ್ರತಿನಿಧಿಗಳು ತಾವು ರೂಪಿಸಿರುವ ತಂತ್ರಜ್ಞಾನ, ತಂತ್ರಾಂಶ ಮತ್ತು ವ್ಯಾಪಾರ ಮಾದರಿಗಳನ್ನು ಜಾಗತಿಕ ಮಟ್ಟದ ಹೂಡಿಕೆದಾರರಿಗೆ ವಿವರಿಸಿದರು. ಈ ನವೋದ್ಯಮಗಳಲ್ಲಿ ಹೂಡಿಕೆ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದವು.

ಬೆಂಗಳೂರಿನಲ್ಲಿ ತಂತ್ರಜ್ಞಾನ ಆಧರಿತ ಉದ್ಯಮಗಳ ಹೂಡಿಕೆಗೆ ಉತ್ತಮ ವಾತಾವರಣವಿದೆ. ಫ್ರಾನ್ಸ್ನ ಕಂಪನಿಗಳು ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಿವೆ
ಅಲೆಕ್ಸಾಂಡ್ರಾ ಡ್ಯುಬ್ಲಾಂಚೆ, ಉಪಾಧ್ಯಕ್ಷೆ, ಆರ್ಥಿಕ ಅಭಿವೃದ್ಧಿ ಸಚಿವಾಲಯ, ಫ್ರಾನ್ಸ್

‘ಬೆಂಗಳೂರಿನಾಚೆಗೂ ಟೆಕ್ ಉದ್ಯಮ...’

‘ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿಗೆ ಇರುವ ಹೆಗ್ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಲೇ ರಾಜ್ಯದ ಬೇರೆ–ಬೇರೆ ಭಾಗಗಳಿಗೂ ತಂತ್ರಜ್ಞಾನ ಆಧಾರಿತ ಉದ್ಯಮಗಳನ್ನು ಒಯ್ಯಲು ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉದ್ಘಾಟಿಸಿ ಮತನಾಡಿದ ಅವರು, ‘ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವೈಮಾನಿಕ ಉದ್ಯಮ ಮತ್ತು ಬಾಹ್ಯಾಕಾಶ ಸಂಶೋಧನೆ, ಕೈಗಾರಿಕೆಗಳಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ರಾಜ್ಯದ ಬೇರೆ ಭಾಗಗಳನ್ನೂ ಇದೇ ರೀತಿ ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲೇ ಈ ಬಾರಿಯ ಶೃಂಗವನ್ನು ‘ಅಪಾರ’ ಎಂಬ ಧ್ಯೇಯದೊಂದಿಗೆ ನಡೆಸಲಾಗುತ್ತಿದೆ’ ಎಂದರು.

‘ಮಂಗಳೂರನ್ನು ಫಿನ್ಟೆಕ್ ಕೇಂದ್ರವಾಗಿ, ಧಾರವಾಡವನ್ನು ಇ.ವಿ ಮತ್ತು ಡ್ರೋನ್ ಕೇಂದ್ರವಾಗಿ ಹಾಗೂ ಮೈಸೂರನ್ನು ಪಿಸಿಬಿ ತಯಾರಿಕಾ ಕೇಂದ್ರವಾಗಿ ರೂಪಿಸಲಾಗುತ್ತಿದೆ. ಆ ಕ್ಷೇತ್ರಗಳಲ್ಲಿ ಮೂರೂ ನಗರಗಳು ದಾಪುಗಾಲು ಇರಿಸಿವೆ. ಆ ಕ್ಷೇತ್ರಗಳಿಗೆ ಸಂಬಂಧಿಸಿದ ತರಬೇತಿ ಕೇಂದ್ರಗಳು ಮತ್ತು ಉದ್ಯಮಗಳು ಅಲ್ಲಿ ಆರಂಭವಾಗುತ್ತಿವೆ’ ಎಂದರು.

‘ಇತರ ಕ್ಷೇತ್ರಗಳಲ್ಲೂ ಬೇರೆ ಜಿಲ್ಲೆಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ‘ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ’ (ಜಿಸಿಸಿ–ಪಾಲಿಸಿ) ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಇದರ ಭಾಗವಾಗಿ ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಮೂರು ನಾವೀನ್ಯತಾ ವಸಾಹತುಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು.

‘ಸಮಸ್ಯೆ ಸರಿಪಡಿಸುತ್ತೇವೆ’

‘ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ದೇಶದಲ್ಲೇ ಮುಂಚೂಣಿಯಲ್ಲಿದೆ. ಆದರೆ ಇಲ್ಲಿ ಕೆಲ ಸಮಸ್ಯೆಗಳಿದ್ದು, ಅವನ್ನು ಶೀಘ್ರವೇ ಸರಿಪಡಿಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ರಾಜ್ಯವು ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ (ಎವಿಜಿಸಿ-ಎಕ್ಸ್ಆರ್) ವಲಯಗಳಲ್ಲಿ ಜಾಗತಿಕ ಮಟ್ಟದ ತರಬೇತಿ ಮತ್ತು ಸೇವೆ ಒದಗಿಸುತ್ತಿದೆ. 2025ರ ವೇಳೆಗೆ ಈ ಕ್ಷೇತ್ರದಲ್ಲಿ 25,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ರೂಪಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.