ರಾಮನಗರ (ಕನಕಪುರ): ನನ್ನನ್ನು ಮುಖ್ಯಮಂತ್ರಿ ಮಾಡಬೇಕು ಅಂತ ನೀವು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ರಿ. ಹೈಕಮಾಂಡ್ ಡಿಸಿಎಂ ಜವಾಬ್ದಾರಿ ನೀಡಿತು. ಆದರ, ನಿರಾಶೆಯಾಗಬೇಕಿಲ್ಲ. ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಸನ್ಮಾನ ಸಮಾರಂಭದಲ್ಲಿ, ತಾವಿನ್ನೂ ಸಿ.ಎಂ ಹುದ್ದೆ ಆಕಾಂಕ್ಷಿ ಎಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯರು ಹೇಳಿದ ಕಿವಿಮಾತು ಕೇಳಿ ಒಪ್ಪಿಕೊಂಡೆ. ಆದರೆ, ನಿಮ್ಮ ನಿರೀಕ್ಷೆ ಹುಸಿಯಾಗುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.