ಉಡುಪಿ: ಇಲ್ಲಿನ ಕಡಿಯಾಳಿ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ತಳ್ಳಾಟ ನಡೆದಿದೆ.

ಬಂದ್ ಬೆಂಬಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಾರಿಗಳಿಗೆ ಮನವಿ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮಧ್ಯೆ ಪ್ರವೇಶಿಸಿ ಪ್ರಧಾನಿ ಮೋದಿ ಪರ ಘೋಷಣೆ ಕೂಗಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಜಮಾಯಿಸಿ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಬೀಸಿದರು.

ಎರಡೂ ಬಣದವರು ಸ್ಥಳದಿಂದ ತೆರಳುವಂತೆ ಮನವಿ ಮಾಡಿದರೂ ಯಾರೂ ಕದಲಲಿಲ್ಲ. ಇದರಿಂದ ಸಿಟ್ಟಿಗೆದ್ದ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಲಾಠಿ ಚಾರ್ಜ್ಗೆ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.