ಮೈಸೂರು: ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜನರೊಂದಿಗೆ ಸರ್ಕಾರವಿದ್ದು, ಅವರಿಗೆ ಅಗತ್ಯವಾದ ಎಲ್ಲ ನೆರವನ್ನೂ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಇಲ್ಲಿ ಹೇಳಿದರು.

ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸಮೀಕ್ಷೆಯಿಂದ ದೊರೆತ ಅಂಕಿ ಅಂಶಗಳ ಪ್ರಕಾರ, ಆಗಸ್ಟ್ ಹಾಗೂ ಸೆಪ್ಟೆಂಬರ್ನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಒಟ್ಟು ₹ 9,952 ಕೋಟಿ ನಷ್ಟ ಉಂಟಾಗಿದೆ. 10.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಅಂದಾಜಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಪ್ರಾಕೃತಿಕ ವಿಕೋಪ ತಡೆ ಯೋಜನೆ ಜಾರಿಯಲ್ಲಿರುವುದರಿಂದ, ಪರಿಹಾರ ವಿತರಣೆ ಸುಲಭವಾಗಿದ್ದು ತೊಂದರೆಗೀಡಾದವರಿಗೆ ಒಂದು ವಾರದೊಳಗಾಗಿ ಪರಿಹಾರ ನೀಡಲಾಗಿದೆ’ ಎಂದರು.

ಈಗಲೂ ಮಳೆ ಮುಂದುವರಿದಿದ್ದು, ₹ 4,851 ಕೋಟಿ ಮೂಲಸೌಕರ್ಯ ನಷ್ಟವನ್ನು ಅಂದಾಜಿಸಲಾಗಿದೆ. ಎಲ್ಲ ರೀತಿಯ ಪರಿಹಾರಕ್ಕೂ ತ್ವರಿತ ಕ್ರಮ ಕೈಗೊಂಡಿರುವುದಾಗಿ ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.