ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿದರು.

ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು, ಪ್ರಕರಣ ಸಂಬಂಧ ಕೆಲವು ಪ್ರಶ್ನೆಗಳನ್ನು ಕೇಳಿದ್ದು, ಇದಕ್ಕೆ ನಲಪಾಡ್ ಉತ್ತರಿಸಿದ್ದಾರೆ ಎಂದು ಗೊತ್ತಾಗಿದೆ.

ಬಿಟ್ಕಾಯಿನ್ ಹಗರಣದ ಆರೋಪಿ ಯಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತ ಎನ್ನಲಾಗಿದೆ. ತನಿಖೆ ವೇಳೆ ಲಭಿಸಿದ ಮಾಹಿತಿ ಆಧರಿಸಿ ಅವರನ್ನು ವಿಚಾರಣೆಗೆ ಕರೆಸಲಾಗಿತ್ತು. ಇದೇ
ಪ್ರಕರಣದಲ್ಲಿ ಈ ಹಿಂದೆ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ ಅವರನ್ನು ವಿಚಾರಣೆ ನಡೆಸಲಾಗಿತ್ತು.

ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣ ಸಂಬಂಧ ಶ್ರೀಕಿ ಸೇರಿ ಆರು ಮಂದಿ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಶ್ರೀಕಿ, ರಾಬಿನ್ ಖಂಡೇನ್ವಾಲ್, ಸುನೀಶ್ ಹೆಗ್ಡೆ ಸೇರಿ 6 ಮಂದಿಯ ಹೆಸರನ್ನು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳು ಡಾರ್ಕ್ವೆಬ್ ಮೂಲಕ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸುತ್ತಿದ್ದರು. ಅದಕ್ಕಾಗಿ ಕ್ರಿಪ್ಟೊ ಕರೆನ್ಸಿ ಮತ್ತು ಬಿಟ್ಕಾಯಿನ್ ಮೂಲಕ ಹಣಕಾಸಿನ ವ್ಯವಹಾರ ನಡೆಸುತ್ತಿದ್ದರು. ಜತೆಗೆ ತನಿಖೆಯಲ್ಲಿ ರಾಬಿನ್ ಖಂಡೇನ್ವಾಲ್ ಜತೆ ಸೇರಿಕೊಂಡು ಕೆಲ ಗೇಮ್ ಆ್ಯಪ್ಗಳನ್ನು ಹ್ಯಾಕ್ ಮಾಡಿ, ಅವುಗಳ ಮಾಲೀಕರಿಂದ ಹಣ ವಸೂಲಿ ಮಾಡುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಉಲ್ಲೇಖಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.