ಬೆಂಗಳೂರು: 60.6 ಬಿಟ್ ಕಾಯಿನ್ (ಸದ್ಯದ ಮಾರುಕಟ್ಟೆ ಮೌಲ್ಯ ₹ 32.48 ಕೋಟಿ) ಕಳ್ಳತನ ಪ್ರಕರಣ ಸಂಬಂಧ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ.

‘ಜಯನಗರದ ಶ್ರೀಕೃಷ್ಣ, ಅಂತರರಾಷ್ಟ್ರೀಯ ಹ್ಯಾಕರ್ ಆಗಿ ಗುರುತಿಸಿಕೊಂಡಿದ್ದಾನೆ. 2017ರಂದು ತುಮಕೂರಿನ ಉನೊ ಕಾಯಿನ್ ಕಂಪನಿಯ ಸರ್ವರ್ನಲ್ಲಿದ್ದ 60.6 ಬಿಟ್ ಕಾಯಿನ್ಗಳು ಕಳ್ಳತನ ಆಗಿದ್ದವು. ಈ ಪ್ರಕರಣದಲ್ಲಿ ಶ್ರೀಕಿ ಪಾತ್ರವಿರುವ ಮಾಹಿತಿ ಇತ್ತು. ವಿಚಾರಣೆಗೆ ಹಾಜರಾಗುವಂತೆ ಶ್ರೀಕಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಆತ ಗೈರಾಗಿದ್ದ. ಇದೇ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ’ ಎಂದು ಎಸ್ಐಟಿ ಮೂಲಗಳು ಹೇಳಿವೆ.

ಬಿಟ್ ಕಾಯಿನ್ ಕಳ್ಳತನಕ್ಕೆ ಸಂಬಂಧಪಟ್ಟಂತೆ ಕಂಪನಿಯ ಸಹ ಸಂಸ್ಥಾಪಕ ಬಿ.ವಿ.ಹರೀಶ್ ಅವರು ತುಮಕೂರಿನ ಸೆನ್ (ಸೈಬರ್ ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿತ್ತು.
.ಬಿಟ್ಕಾಯಿನ್,PSI ಹಗರಣದಂತೆ ಪ್ರಜ್ವಲ್ ಪ್ರಕರಣದ ತನಿಖೆ ಹಳ್ಳ ಹಿಡಿಯದಿರಲಿ:ಯತ್ನಾಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.