ಬೆಂಗಳೂರು: 'ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಪಾದಯಾತ್ರೆ ತಡೆಯಲು ಏನೇನೋ ಕಸರತ್ತು ನಡೆಸುತ್ತಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.

'ಪಾದಯಾತ್ರೆ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಜನರು ಈಗಾಗಲೇ ಅವರಿಗೆ ಪಾಠ ಕಲಿಸಿದ್ದಾರೆ. ಮುಂದಿನ ಚುನಾವಣೆಗೆ ಜನರು ನಮ್ಮ ಪಕ್ಷವನ್ನ ಅಧಿಕಾರಕ್ಕೆ ತರಲಿದ್ದಾರೆ' ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮೋದಿ ವೈಫಲ್ಯದಿಂದ ಮುಗ್ಧ ನವೀನ್ ಸಾವು: ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. 'ಜೆಡಿಎಸ್ನವರು ಈಗಲ್ಲ ಮೊದಲಿನಿಂದಲೂ ಒಳ ಒಪ್ಪಂದ ಮಾಡಿಕೊಂಡೇ ಬಂದಿದ್ದಾರೆ. ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ಎದುರಿಸಿದ್ದಾರೆ. ಇದೇನು ಹೊಸದಲ್ಲ ಬಿಡಿ. ಮುಂದೆ ನಮ್ಮದೇ ಪಕ್ಷ ನಿರ್ಣಾಯಕ ಸ್ಥಾನದಲ್ಲಿ ಇರಲಿದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.