ಮೈಸೂರು: ‘ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಹೇಗಾದರೂ ಮಾಡಿ ಬೀಳಿಸುವ ಕೆಟ್ಟ ಸಂಸ್ಕೃತಿ ಬಿಜೆಪಿಯವರದಾಗಿದ್ದು, ಅದಕ್ಕೆ ಬೇಕಾದ ಎಲ್ಲ ರೀತಿಯ ವಾಮಮಾರ್ಗಗಳನ್ನೂ ಅನುಸರಿಸುತ್ತಾರೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕರ್ನಾಟಕದಲ್ಲೂ ಆ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ, ಬಿಜೆಪಿಯವರ ಕುತಂತ್ರ ಇಲ್ಲಿ ನಡೆಯುವುದಿಲ್ಲ’ ಎಂದರು.

‘ಕಾಂಗ್ರೆಸ್ ಜನಾಂದೋಲನ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯ ಜನರನ್ನು ಸೇರಿಸಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಎಷ್ಟು ಸಾಧ್ಯವೋ ಅಷ್ಟು ಮಂದಿಯನ್ನು ಕರೆದುಕೊಂಡು ಬರುವಂತೆ ಶಾಸಕರಿಗೆ ತಿಳಿಸಲಾಗಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ರಾಜ್ಯದಲ್ಲಿಯೇ ದೊಡ್ಡ ದಾಖಲೆ ಬರೆದಿತ್ತು. ಇಲ್ಲಿ ನಡೆಯುತ್ತಿರುವ ಸಮಾವೇಶ ಮೈಸೂರಿನ ಇತಿಹಾಸದಲ್ಲೇ ದಾಖಲೆ ಬರೆಯಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.