ಬೆಂಗಳೂರು: ಸಿದ್ದರಾಮಯ್ಯ ರಾಜ್ಯದ ಪ್ರಮುಖ ಜನನಾಯಕ. ಅದಕ್ಕಾಗಿ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ನನ್ನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಿದಂತೆ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಿಜೆಪಿ ದ್ವೇಷ ರಾಜಕಾರಣಕ್ಕೆ ಕನ್ನಡಿಯಾಗಿದೆ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಹಾಗೂ ವಿರೋಧ ಪಕ್ಷಗಳ ಎಲ್ಲ ನಾಯಕರಿಗೂ ಬಿಜೆಪಿ ಕಿರುಕುಳ ಕೊಡುತ್ತಿದೆ’ ಎಂದರು.

‘ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಿರುದ್ಧ ಕೇರಳ ಮುಖ್ಯಮಂತ್ರಿ ಆರೋಪ ಮಾಡಿರುವ ಕುರಿತು ಮಾಹಿತಿ ಇಲ್ಲ. ಈ ಬಾರಿಯ ಉಪ ಚುನಾವಣೆಯಲ್ಲಿ ಸೋಲು ಅನುಭವಿಸುವ ಮುನ್ಸೂಚನೆ ದೊರೆತಿದ್ದು, ಅದಕ್ಕಾಗಿ ಆರೋಪ ಮಾಡುತ್ತಿದ್ದಾರೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.