ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಮೂರು ಸ್ಥಾನಗಳ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಭಾನುವಾರ ಪ್ರಕಟಿಸಲಿದೆ.

ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನ. ಕೇಂದ್ರ ಚುನಾವಣಾ ಆಯೋಗ ಮೂರು ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ, ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲುವುದು ಕಷ್ಟ. ಆದರೆ, ಕಾಂಗ್ರೆಸ್ನಲ್ಲಿ ಹಲವು ಶಾಸಕರು ಬಂಡಾಯದ ಬಾವುಟ ಹಾರಿಸುವ ಸಾಧ್ಯತೆ ಇದೆ. ಅವರು ಅಡ್ಡ ಮತದಾನ ಮಾಡಬಹುದು ಎಂಬ ವಿಶ್ವಾಸದಲ್ಲಿ ಬಿಜೆಪಿ ಇದೆ. ಒಂದು ವೇಳೆ 15 ಕ್ಕೂ ಹೆಚ್ಚು ಶಾಸಕರು ಅಡ್ಡ ಮತದಾನ ಮಾಡಿದರೆ ಬಿಜೆಪಿ ಮೂರು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯೂ ಇದೆ.

ಮಾಜಿ ಸಚಿವರಾದ ಬಿ.ಜೆ.ಪುಟ್ಟಸ್ವಾಮಿ, ಸಿ.ಪಿ.ಯೋಗೀಶ್ವರ, ಪರಿಷತ್ನ ಮಾಜಿ ಸದಸ್ಯ ಡಿ.ಎಸ್.ವೀರಯ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ರಾಜ್ಯ ಬಿಜೆಪಿ ಖಜಾಂಜಿ ಸುಬ್ಬ ನರಸಿಂಹ ಅವರ ಹೆಸರುಗಳು ಮಂಚೂಣಿಯಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.