ಬೆಂಗಳೂರು: ಕಿಯೋನಿಕ್ಸ್ ಭ್ರಷ್ಟಾಚಾರ, ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆಯವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಅವರು ಒತ್ತಾಯಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಅಕ್ರಮ ಮತ್ತು ಇದರಲ್ಲಿ ಪ್ರಿಯಾಂಕ್ ಖರ್ಗೆಯವರ ಪಾತ್ರದ ಕುರಿತು ಸಿಬಿಐ ತನಿಖೆ ಮಾಡಲು ಗೃಹ ಸಚಿವ ಪರಮೇಶ್ವರ್ ಅವರು ಶಿಫಾರಸು ಮಾಡಬೇಕು ಎಂದರು.

ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಬಗ್ಗೆ ದೊಡ್ಡದಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆಯವರು ಇವತ್ತು ಈ ಎಲ್ಲ ವಿದ್ಯಮಾನಗಳ ಕೇಂದ್ರ ಬಿಂದುವಿನಂತಿದ್ದಾರೆ. ಇವರು ಸಂಪೂರ್ಣ ಕರ್ತವ್ಯವಿಮುಖರಾಗಿದ್ದು, ಸಚಿವರಾಗಿ ಮುಂದುವರೆಯಲು ನೈತಿಕತೆ ಹೊಂದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಳೆದ ಆರು ತಿಂಗಳಿನಿಂದ ಭ್ರಷ್ಟಾಚಾರ ಎಂಬುದು ಮಿತಿ ಮೀರಿದ ವಿದ್ಯಮಾನವಾಗಿದೆ. ಕಿಯೋನಿಕ್ಸ್ ಎಂಡಿ, ಗುತ್ತಿಗೆದಾರರ ಬಳಿ ಸುಮಾರು ಶೇ 12 ರಷ್ಟು ಕಮಿಷನ್ಗಾಗಿ ಒತ್ತಾಯ ಮಾಡಿದ್ದಾರೆ. ಸರಕಾರವು ತನ್ನೆಲ್ಲ ಕರ್ತವ್ಯವನ್ನು ಲೂಟಿ ಮಾಡುವ ಕಡೆ ಗಮನ ಹರಿಸಿದಂತಿದೆ. ಕಾಂಗ್ರೆಸ್ನಲ್ಲಿ ಗಜೆಟೆಡ್ ಹುದ್ದೆಗೆ ರೇಟ್ ನಿಗದಿಯಾಗಿದೆ. ಐಎಎಸ್ ಹುದ್ದೆಗಳು ಬಿಕರಿ ಆಗುತ್ತಿವೆ ಎಂದು ಆರೋಪಿಸಿದರು.
.ಬ್ಲೂಟೂತ್ ಪ್ರಕರಣ: ಪ್ರಾಥಮಿಕ ಮಾಹಿತಿ ಬಳಿಕ ಮುಂದಿನ ನಿರ್ಧಾರ– ಪ್ರಿಯಾಂಕ್ ಖರ್ಗೆ.ಪ್ರಿಯಾಂಕ್ ಖರ್ಗೆ ರಾಜ್ಯದ ಸ್ಪೆಷಲ್ ಬೇಬಿ: ಸಂಸದ ಜಾಧವ.
ಕಲಬುರಗಿ ಕೆಇಎ ಪರೀಕ್ಷೆಯ ಅಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಪ್ರಯತ್ನ ಪಟ್ಟಿದ್ದ ಆರ್.ಡಿ.ಪಾಟೀಲ್ ಪ್ರಮುಖ ಆರೋಪಿ. ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಯಾರನ್ನು ಬೊಟ್ಟು ಮಾಡಿದರೋ ಆ ಆರ್.ಡಿ.ಪಾಟೀಲ್ಗೆ ಸರಕಾರವೇ ಕೃಪಾಪೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಪರ್ಯಾಯ ಶಕ್ತಿಯಾಗಿ, ಬದಲಿ ಸಿಎಂ ಆಗಿ, ಎಐಸಿಸಿ ಅಧ್ಯಕ್ಷರ ನೆರಳಿನಂತೆ ಅವರು ವರ್ತಿಸುತ್ತಿದ್ದಾರೆ. ಘಟನೆ ನಡೆದು ಆರೇಳು ದಿನಗಳಾಗಿವೆ. ಆರ್.ಡಿ.ಪಾಟೀಲ್ ತಪ್ಪಿಸಿಕೊಳ್ಳಲು ಸರಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಟೀಕಿಸಿದರು.

ಇದಕ್ಕೆ ಗೃಹ ಸಚಿವ ಪರಮೇಶ್ವರ್ ಉತ್ತರಿಸಬೇಕಿತ್ತು. ಅವರ ಬದಲು ಪ್ರಿಯಾಂಕ್ ಖರ್ಗೆ ಉತ್ತರ ಕೊಡುತ್ತಿದ್ದಾರೆ. ಆರೋಪಿಗಳ ಸಂರಕ್ಷಣೆಯನ್ನು ಪ್ರಿಯಾಂಕ್ ಖರ್ಗೆಯವರು ಮಾಡುತ್ತಿದ್ದಾರೆ ಎಂದ ಅವರು, ಪ್ರಿಯಾಂಕ್ ಅವರು ಸಿಬಿಐ ತನಿಖೆ ಬೇಡ ಎಂದಿದ್ದು ಯಾಕೆ? ಸಿಬಿಐ ತನಿಖೆ ಬೇಕೇ ಅಥವಾ ಬೇಡ ಎನ್ನಲು ನಿಮಗೆ ಯಾವ ಅಧಿಕಾರ ಇದೆ ಎಂದು ಕೇಳಿದರು. ಇದು ಗೃಹ ಸಚಿವರ ಕೆಲಸ. ನೀವ್ಯಾಕೆ ಸಿಬಿಐ ತನಿಖೆ ಬೇಡ ಎನ್ನುತ್ತೀರಿ ಎಂದು ಆಕ್ಷೇಪಿಸಿದರು.

‘ನಿಮ್ಮ ಸಚಿವಾಲಯದ ಸಂಗಪ್ಪ ಇವತ್ತು ಹಣ ಕೇಳುತ್ತಾರೆ. ಗುತ್ತಿಗೆದಾರರು ಇವತ್ತು ಸರಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸರಕಾರ ₹300 ಕೋಟಿ ಹಣಕ್ಕೆ ಕಮಿಷನ್ ಕೇಳಿದ್ದಾಗಿ ಹೇಳಿದ್ದಾರೆ. ಇದಕ್ಕೆ ಉತ್ತರದಾಯಿ ಗ್ರಾಮೀಣಾಭಿವೃದ್ಧಿ ಸಚಿವರಾದ ನೀವೇ ಅಲ್ಲವೇ? ಎಂದು ಕೇಳಿದರು. ಕಳೆದ 5 ತಿಂಗಳಿನಿಂದ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸೇರಿ ಸುಮಾರು 80 ಸಾವಿರ ಜನರಿಗೆ ನೀವು ಗೌರವಧನ ಕೊಡಲು ಪ್ರಯತ್ನಿಸಿಲ್ಲ’ ಎಂದು ಟೀಕಿಸಿದರು.

ಜಲ ಜೀವನ್ ಮಿಷನ್ ಹಣ ಕೊಡಲು ನಿಮಗೆ ಪುರುಸೊತ್ತಿಲ್ಲ. ಆದರೆ, ಕಿಂಗ್ಪಿನ್ಗಳ ರಕ್ಷಣೆ ಮಾಡಿ ಭ್ರಷ್ಟಾಚಾರಿಗಳನ್ನು ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತಿದೆ. ಕಲಬುರಗಿ ಒಳಗಿನ ವಿದ್ಯಮಾನಗಳ ಬಗ್ಗೆ ಮಾತನಾಡಲು ನಿಮಗೆ ನೈತಿಕತೆ ಎಲ್ಲಿದೆ? ಆರ್.ಡಿ.ಪಾಟೀಲನ್ನು ಬೆಳೆಸಿ, ಪೋಷಿಸಿ ಸಂರಕ್ಷಿಸಿದ್ದು ಪ್ರಿಯಾಂಕ್ ಖರ್ಗೆ ಎಂದು ದೂರಿದರು. ಈ ಎಲ್ಲ ಪ್ರಕರಣಗಳ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.