ಬೆಂಗಳೂರು: ಜೆಡಿಎಸ್-ಬಿಜೆಪಿ ಮೈತ್ರಿ ಇನ್ನಷ್ಟು ಗಟ್ಟಿಗೊಳಿಸಲು ನಿರ್ಧರಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಮುಂದಿನ ವಾರ ದೆಹಲಿಗೆ ತೆರಳಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಅ.14ರಂದು ಅಮಾವಾಸ್ಯೆ ಕಳೆದ ನಂತರ ಬಿಜೆಪಿ ವರಿಷ್ಠರ ಜತೆ ಮುಂದಿನ ಯೋಜನೆಗಳ ಕುರಿತು ಚರ್ಚೆ ನಡೆಸುವರು. ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡುವರು. ಮುಂದಿನ ಲೋಕಸಭಾ ಚುನಾವಣೆಗೆ ಕ್ಷೇತ್ರಗಳನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಸಲು ಈ ಭೇಟಿ ಪೂರ್ವಭಾವಿ ವೇದಿಕೆಯಾಗಲಿದೆ. ಆದರೆ, ಯಾವ, ಯಾವ ನಾಯಕರನ್ನು ಭೇಟಿ ಮಾಡುತ್ತಾರೆ ಎನ್ನುವುದು ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡಲಾಗುತ್ತದೆ ಎನ್ನುವ ವಿಷಯವನ್ನು ನಿರಾಕರಿಸಿದ ಕುಮಾರಸ್ವಾಮಿ, ‘ಅಂತಹ ಯಾವುದೇ ಪ್ರಸ್ತಾಪವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಡುವುದೇ ನನ್ನ ಗುರಿ. ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.