ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮಸಾಕ್ಷಿ ಹುಡುಕುವುದೆಲ್ಲಿ: ಬೊಮ್ಮಾಯಿ

Published : 3 ಅಕ್ಟೋಬರ್ 2024, 14:57 IST
Last Updated : 3 ಅಕ್ಟೋಬರ್ 2024, 14:57 IST
ಫಾಲೋ ಮಾಡಿ
Comments

ನವದೆಹಲಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಯನ್ನು ನೋಡುವವರು ಯಾರು? ಅದನ್ನು ಎಲ್ಲಿಂದ ಹುಡುಕಬೇಕು? ಅವರ ಆತ್ಮಸಾಕ್ಷಿ ನಡೆಯಿಂದ ಗೊತ್ತಾಗಬೇಕೇ ಹೊರತು ನುಡಿಯಿಂದ ಅಲ್ಲ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಆತ್ಮಸಾಕ್ಷಿಯೇ ಅಂತಿಮ ನ್ಯಾಯಾಲಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಜೊತೆಗೆ ಸರ್ಕಾರಕ್ಕೂ ಅಭದ್ರತೆ ಕಾಡುತ್ತಿದೆ’ ಎಂದರು.

‘ಮುಂದಿನ ಮೂರು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಪ್ರತಿದಿನ ಹೇಳುತ್ತಿದ್ದಾರೆ. ಅವರಿಗೆ ಅಭದ್ರತೆ ಕಾಡುತ್ತಿರುವುದಕ್ಕೆ ಈ ಹೇಳಿಕೆಯೇ ಸಾಕ್ಷಿ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸ ಆಗುತ್ತಿಲ್ಲ. ಕಾಂಗ್ರೆಸ್‌ನವರು ಜನಪರ‌ ಕೆಲಸ ಮಾಡಬೇಕು. ಇಲ್ಲದಿದ್ದರೆ ಜಾಗ ಖಾಲಿ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

‘ಆರ್.ಅಶೋಕ ಪ್ರಕರಣಕ್ಕೂ ಸಿದ್ದರಾಮಯ್ಯ ಪ್ರಕರಣಕ್ಕೂ ವ್ಯತ್ಯಾಸ ಇದೆ. ಅಶೋಕ ಅವರು ಪ್ರಕರಣ ದಾಖಲಾಗುವ ಮುನ್ನವೇ ಜಮೀನು ವಾಪಸ್ ಕೊಟ್ಡಿದ್ದರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT