ಬೆಂಗಳೂರು: ರಾಜಕೀಯದಿಂದ ನಿವೃತ್ತರಾಗುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರು ಹೇಳಿದ್ದಾರೆ.

ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಯ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. ‘ನನಗೀಗ 90 ವರ್ಷ ವಯಸ್ಸು ಆಗಿದ್ದು, ಇದರ ಅರಿವು ನನಗಿದೆ. 90 ವರ್ಷದ ನಾನು 50 ವರ್ಷದವನಂತೆ ನಟಿಸಲು ಸಾಧ್ಯವಿಲ್ಲ. ಆದ್ದರಿಂದ ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ’ ಎಂದು ಅವರು ತಿಳಿಸಿದರು.

‘ನಿವೃತ್ತಿ ಆಗುತ್ತಿದ್ದೇನೆ ಎಂದರೆ ಸನ್ಯಾಸ ಪಡೆಯುತ್ತಿದ್ದೇನೆ ಎಂದಲ್ಲ. ಪಕ್ಷ ಅಥವಾ ನಾಯಕರು ಸಂಘಟನೆ ಮತ್ತು ಇತರ ವಿಚಾರಗಳಲ್ಲಿ ಸಲಹೆಗಳನ್ನು ಕೇಳಿದರೆ ನೀಡಲು ಸಿದ್ಧನಿದ್ದೇನೆ. ಆದರೆ ನಾನಾಗಿಯೇ ಮೇಲೆ ಬಿದ್ದು ಸಲಹೆ ನೀಡಲು ಹೋಗುವುದಿಲ್ಲ. ಹಳೇ ಮೈಸೂರು ಭಾಗದಲ್ಲಿ ಸಂಘಟನೆಯ ವಿಚಾರದಲ್ಲಿ ಸಲಹೆ ನೀಡಿದರೆ ಕೊಡುತ್ತೇನೆ’ ಎಂದರು.

‘ನಾನಾಗಿಯೇ ರಾಜಕೀಯದಿಂದ ಹಿಂದಕ್ಕೆ ಸರಿಯುತ್ತಿರುವುದರಿಂದ ನನ್ನನ್ನು ಪಕ್ಷ ನಿರ್ಲಕ್ಷಿಸುತ್ತಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.