ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಎದುರಿಸುವ ಕಾರ್ಯತಂತ್ರವೂ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ಸೋಮವಾರ ಸಂಜೆ ನಡೆಯಲಿದೆ.

ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರೂ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಕೋವಿಡ್ ನಿಯಂತ್ರಣ, ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪ, ಬೆಲೆ ಏರಿಕೆ, ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ವಿರೋಧಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದಾಗ ಎದುರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ಸಂಬಂಧ ಮುಖ್ಯಮಂತ್ರಿಯವರೇ ಪಕ್ಷದ ಶಾಸಕರಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮುಖ್ಯ ಸಚೇತಕ: ಇಂದು ನಿರ್ಧಾರ?

ಬೆಂಗಳೂರು: ವಿಧಾನಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತರಾಗಿದ್ದ ವಿ. ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಆ ಹುದ್ದೆ ಖಾಲಿಯಾಗಿದೆ. ನೂತನ ಮುಖ್ಯ ಸಚೇತಕರ ನೇಮಕ ಸೋಮವಾರ ನಡೆಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.