ಹುಬ್ಬಳ್ಳಿ: ‘ರೈತರ ಪಹಣಿಯಲ್ಲಿ ವಕ್ಫ್ ಎಂದು ಹೆಸರು ನಮೂದಿಸಿದ್ದೇ ಬಿಜೆಪಿ ಸರ್ಕಾರ’ ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ಧಾರವಾಡ ಜಿಲ್ಲಾಧ್ಯಕ್ಷ ಶಮೀಮ್ ಅಹ್ಮದ್ ಮುಲ್ಲಾ ಆರೋಪಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜರಿಂದ ದಾನವಾಗಿ ಬಂದ ಭೂಮಿಯಲ್ಲಿ ಮುಲ್ಲಾ, ಖಾಜಿ, ಖತೀಬ್, ಮಕಾಂದಾರ ಇವರೆಲ್ಲರೂ ಈ ಹಿಂದೆ ಅನ್ಯರಿಗೆ ಶೇ 70ರಿಂದ 80ರಷ್ಟು ಆಸ್ತಿ ಮಾರಾಟ ಮಾಡಿದ್ದಾರೆ. ಈ ಆಸ್ತಿ ಖರೀದಿಸಿದ ರೈತರ ಪಹಣಿಯಲ್ಲಿ 2019ರಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ವಕ್ಫ್ ಆಸ್ತಿ ಎಂದು ನಮೂದಿಸಿತ್ತು. ಇದನ್ನು ವಿರೋಧಿಸಿ ಇನಾಮ ಜಮೀನು ಸಂರಕ್ಷಣಾ ಹೋರಾಟ ರಚಿಸಿ ಪ್ರತಿಭಟನೆ ನಡೆಸಲಾಯಿತು. ಆದರೆ, ಇದಕ್ಕೆ ಅಂದಿನ ಸರ್ಕಾರ ಸ್ಪಂದಿಸಲಿಲ್ಲ’ ಎಂದು ಹೇಳಿದರು.

‘2019ರಲ್ಲಿ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ 160 ರೈತರ 482 ಎಕರೆ 15 ಗುಂಟೆ ಜಮೀನು ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ, ಶಿರೂರು ತಾಲ್ಲೂಕಿನ ಹಲವಾರು ಎಕರೆ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಿಸಲಾಗಿತ್ತು. ಆ ಬಗ್ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಕ್ಫ್ ಸಚಿವರಾಗಿದ್ದ ಪ್ರಭು ಚವ್ಹಾಣ ಹಾಗೂ ಸಂಸದ ಪ್ರಲ್ಹಾದ ಜೋಶಿ ಅವರ ಗಮನಕ್ಕೆ ತಂದು, ರೈತರಿಗಾದ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಯಾವುದೇ ಪ್ರಯೋಜನೆ ಆಗಲಿಲ್ಲ. ಕೊನೆಗೆ ಕೆಲ ರೈತರು ಎರಡೂವರೆ ವರ್ಷಗಳ ಕಾಲ ಕೋರ್ಟ್ಗೆ ಅಲೆದಾಡಿ ಪಹಣಿಯಲ್ಲಿದ್ದ ವಕ್ಪ್ ಹೆಸರನ್ನು ತೆಗೆಸಿಕೊಂಡಿದ್ದಾರೆ. ಆದರೆ ಇನ್ನೂ ಅನೇಕ ರೈತರ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದೇ ನಮೂದಿದೆ’ ಎಂದರು.

‘ಈ ಹಿಂದೆ ನಮ್ಮ ಮನವಿಗೆ ಸ್ಪಂದಿಸದ ಬಿಜೆಪಿ ನಾಯಕರು, ಈಗ ವಕ್ಫ್ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಅಂದಿನ ಬಿಜೆಪಿ ಸರ್ಕಾರವೇ ಈ ಸಮಸ್ಯೆ ಬಗೆಹರಿಸಿದ್ದರೆ ಇಂದು ರೈತರಿಗೆ ತೊಂದರೆ ಆಗುತ್ತಿರಲಿಲ್ಲ. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಸೇರಿಸುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಸೂಚಿಸಿದ್ದು ತಪ್ಪು. ರೈತರ ಜಮೀನಿನ ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಹೆಸರನ್ನು 15 ದಿನದೊಳಗೆ ತೆಗೆದುಹಾಕಬೇಕು. ಇಲ್ಲದಿದ್ದರೆ ಕರ್ನಾಟಕ ಮುಲ್ಲಾ ಅಸೋಸಿಯೇಷನ್ ನೇತೃತ್ವದಲ್ಲಿ ಎಲ್ಲ ಧರ್ಮದ ರೈತರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಖಾಜಿ, ಅಬ್ದುಲ್ ಮಜೀದ್ ಮುಲ್ಲಾ, ಅಬ್ದುಲ್ ರಜಾಕ್ ಮುಲ್ಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.