ಬೆಂಗಳೂರು: ಗುತ್ತಿಗೆದಾರರಿಗೆ ಸರ್ಕಾರ ಬಿಡುಗಡೆ ಮಾಡಿರುವ ₹650 ಕೋಟಿ ಹಣದಲ್ಲಿ ಬಂದಿರುವ ಕಮಿಷನ್ ಹಣವೇ ₹42 ಕೋಟಿ. ಅದು ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಆರೋಪಿಸಿದರು.

ಈ ಹಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಹಣ, ಅದರ ಹಿಂದಿನ ಉದ್ದೇಶದ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದು ಕಾಂಗ್ರೆಸ್‌ನ ಹಣವೆನ್ನಲು ಬಿಜೆಪಿಯವರ ಬಳಿ ಏನು ಸಾಕ್ಷ್ಯವಿದೆ ಎಂದು ಸಚಿವ ಎಂ.ಬಿ.ಪಾಟೀಲರು ಪ್ರಶ್ನೆ ಮಾಡಿದ್ದಾರೆ, ಗುತ್ತಿಗೆದಾರರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿ ಒಪ್ಪಂದ ಆದ ಬಳಿಕವೇ ₹650 ಕೋಟಿ ಬಿಡುಗಡೆಯಾಗಿದೆ ಎಂದು ಅವರು ಹೇಳಿದರು.

ಈ ಹಣವನ್ನು ತೆಲಂಗಾಣ ಚುನಾವಣೆಗೋಸ್ಕರವೇ ಸಂಗ್ರಹಿಸಿದ್ದು ಎಂಬ ಮಾತು ರಾಜಕೀಯ ವಲಯದಲ್ಲಿದೆ ಎಂದ ಅವರು, ‘ಇದು ನಮ್ಮ ಹಣವಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದು ನಿಮ್ಮದೇ ಹಣ ಎಂದು ಬಿಜೆಪಿ ಹೇಳುತ್ತದೆ’ ಎಂದು ರವಿಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.