ನವದೆಹಲಿ: ತೆಲಂಗಾಣದಲ್ಲಿ ಮದುವೆಯೊಂದರಲ್ಲಿ ಸಚಿವ ಶಿವಾನಂದ ಪಾಟೀಲ ಅವರಿಗೆ ನೋಟುಗಳ ಮಳೆಗರೆದ ಕುರಿತ ವಿಷಯ ಪ್ರಸ್ತಾಪಿಸಿದ ಬಿಜೆಪಿ ವಕ್ತಾರ ಗೌರವ ಭಾಟಿಯಾ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಹಣ ಬಳಸಿಕೊಂಡು ಪ್ರಜಾಪ್ರಭುತ್ವ ಮತ್ತು ಚುನಾವಣೆಗಳನ್ನು ಅಪವಿತ್ರಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊದಲ್ಲಿರುವುದು ತಾವೇ ಎಂದು ಪಾಟೀಲ್ ಒಪ್ಪಿಕೊಂಡಿದ್ದಾರೆ . ಆದರೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಇಂತಹ ‘ಭ್ರಷ್ಟ’ ಸಚಿವರ ಮುಂದುವರಿಕೆ ಪ್ರಜಾಪ್ರಭುತ್ವಕ್ಕೆ ಅಪಾಯವಾಗಿರುವುದರಿಂದ ಅವರನ್ನು ಕೂಡಲೇ ವಜಾಗೊಳಿಸಬೇಕು ಪ್ರಾಮಾಣಿಕ ಪ್ರಧಾನಿ ನಾಯಕತ್ವದಲ್ಲಿ ಬಿಜೆಪಿ ಜನರಿಗೆ ಸೇವೆ ಸಲ್ಲಿಸುತ್ತಿದ್ದರೆ, ಮತ್ತೊಂದೆಡೆ ಭಾರಿ ಭ್ರಷ್ಟ ಕಾಂಗ್ರೆಸ್ ಇದೆ. ಭ್ರಷ್ಟಾಚಾರ ಕಾಂಗ್ರೆಸ್ ಡಿಎನ್ಎಯಲ್ಲಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.