ಬೆಂಗಳೂರು: ನಾಲ್ಕು ರಾಜ್ಯಗಳಲ್ಲಿನ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ.

ಕರ್ನಾಟಕದಲ್ಲಿ ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಹಾಗೂ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಆಧ್ಯಕ್ಷ ಬಂಗಾರು ಹನುಮಂತು ಅವರು ಕ್ರಮವಾಗಿ ಹಾವೇರಿಯ ಶಿಗ್ಗಾವಿ ಮತ್ತು ಬಳ್ಳಾರಿಯ ಸಂಡೂರು (ಎಸ್.ಟಿ. ಮೀಸಲು) ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆ.

ಬಿಜೆಪಿಯ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ನ ಇ.ತುಕಾರಾಂ ಅವರು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಈ ಕ್ಷೇತ್ರಗಳು ತೆರವಾಗಿದ್ದವು.

ಚನ್ನಪಟ್ಟಣ ಕ್ಷೇತ್ರಕ್ಕೆ ಇನ್ನಷ್ಟೇ ಅಭ್ಯರ್ಥಿ ಘೋಷಣೆಯಾಗಬೇಕಿದೆ. ಮಿತ್ರ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಈ ಕ್ಷೇತ್ರಕ್ಕಾಗಿ ಭಾರಿ ಪೈಪೋಟಿ ನಡೆಯುತ್ತಿದೆ.

ಇಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದಾರೆ. ಅವರು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಶಾಸಕ ಸ್ಥಾನ ತೆರವಾಗಿದೆ.
.ಉಪ ಚುನಾವಣೆ | ವೈಯಕ್ತಿಕ ಕಾರಣದಿಂದ ಪುತ್ರನ ಸ್ಪರ್ಧೆ ಬೇಡ ಎಂದಿದ್ದೇನೆ: ಬೊಮ್ಮಾಯಿ.ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಉಪಚುನಾವಣೆ; ಟಿಕೆಟ್ಗಾಗಿ ಜಂಗೀ ಕುಸ್ತಿ.
ಉಳಿದಂತೆ ಕೇರಳ, ಮಧ್ಯಪ್ರದೇಶ, ರಾಜಸ್ಥಾನದ ತಲಾ ಎರಡು ಕ್ಷೇತ್ರಗಳು, ಛತ್ತೀಸಗಢದ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.