ಬೆಂಗಳೂರು: ಇದೇ 27ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರು, ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳೂ ಸೇರಿ 900 ಕ್ಕೂ ಹೆಚ್ಚು ಅಪೇಕ್ಷಿತರು ಭಾಗವಹಿಸಲಿದ್ದು, ಸಭೆಗೆ ಡಿಜಿಟಲ್ ಸ್ಪರ್ಶ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಪ್ರೀತಂಗೌಡ ಹೇಳಿದರು.

ಬಿ.ವೈ.ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ. ಲೋಕಸಭಾ ಚುನಾವಣೆ ತಯಾರಿ ದೃಷ್ಟಿಯಲ್ಲಿ ಇದು ಅತ್ಯಂತ ಮಹತ್ವದ ಸಭೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿಜಿಟಲ್ ಎಂಟ್ರಿ ಮೂಲಕ ಪ್ರತಿಯೊಬ್ಬ ಅಪೇಕ್ಷಿತರ ನೋಂದಣಿ ನಡೆಯಲಿದೆ. ಅಪೇಕ್ಷಿತರಿಗೆ ಹೊಸ ಅನುಭವ ನೀಡಲಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ತಯಾರಿ ಅಲ್ಲದೇ, ಸಂಘಟನೆ ಮತ್ತು ಮುಂದಿನ ಕಾರ್ಯಯೋಜನೆಯ ಕುರಿತು ಚರ್ಚೆ ನಡೆಯಲಿದೆ. ಇದಕ್ಕಾಗಿ ಕಳೆದ 10 ದಿನಗಳಿಂದ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ. ರಾಜ್ಯ ಸರ್ಕಾರದ ಧೋರಣೆ, ಹಿಂದೂ ವಿರೋಧಿ ನೀತಿ, ಅಭಿವೃದ್ಧಿಗೆ ಹಿನ್ನಡೆ ಕುರಿತ ವಿಚಾರಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.