ಚಿಕ್ಕಬಳ್ಳಾಪುರ: ಅನರ್ಹ ಶಾಸಕರು ಸುಪ್ರೀಂಕೋರ್ಟ್ ತೀರ್ಪಿನ ನಂತರ ಬಿಜೆಪಿಗೆ ಬಂದಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಹೇಳಿದರು.

ನಗರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಮಗು ಹುಟ್ಟಿದಾಗ ಚಿಕ್ಕದಾಗಿ ಕಾಣುತ್ತದೆ. ಆದರೆ ಹಂತ ಹಂತವಾಗಿ ಬೆಳೆದು ದೊಡ್ಡದಾಗುತ್ತದೆ. ಅದೇ ರೀತಿ ಇವರ ಬೆಳವಣಿಗೆಯೂ ಪಕ್ಷದಲ್ಲಿ ಆಗಲಿದೆ. ಅವರಿಗೆ ಹಂತ ಹಂತವಾಗಿ ಪಕ್ಷದ ಎಲ್ಲ ಕಾರ್ಯಕರ್ತರ ಬೆಂಬಲ ದೊರೆಯಲಿದೆ’ ಎಂದು ಹೇಳಿದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಯಾರೊಬ್ಬರೂ ಡಾ.ಜಿ.ಪರಮೇಶ್ವರ ಹೆಸರನ್ನು ಹೇಳುವುದಿಲ್ಲ. ಅದೇ ರೀತಿ ಕನಕಪುರದಲ್ಲಿ ಯಾರೊಬ್ಬರೂ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಹೆಸರನ್ನು ಹೇಳುವುದಿಲ್ಲ. ಅವರು ಏನೂ ಅಭಿವೃದ್ಧಿ ಮಾಡಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.