ನವದೆಹಲಿ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಬಾರದು ಎಂದು ಟಿಕೆಟ್ ಆಕಾಂಕ್ಷಿ ಸ್ಫೂರ್ತಿ ಚಿದಾನಂದ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ‘ಸೋಮಣ್ಣ ಅವರು ಕ್ಷೇತ್ರಕ್ಕೆ ಹೊರಗಿನವರು. ಅವರು 40 ವರ್ಷಗಳಿಂದ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಸಚಿವರಾಗಿ ಕೆಲಸ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸೋತಿದ್ದಾರೆ. ಅವರ ಬದಲು ಯುವಕರಿಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

‘ಆರು ವರ್ಷಗಳಿಂದ ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಆರೂವರೆ ಲಕ್ಷ ಒಬಿಸಿ ಮತಗಳಿವೆ. ಕ್ಷೇತ್ರದ ಜನರು ಪ್ರಜ್ಞಾವಂತರಿದ್ದಾರೆ. ಹಾಗಾಗಿ, ನನಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತಿತರ ನಾಯಕರಿಗೆ ಮನವಿ ಸಲ್ಲಿಸಲಾಗಿದೆ. ಸಂಘಟನೆ ಮುಂದುವರಿಸುವಂತೆ ಸೂಚಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.