ಬೆಂಗಳೂರು: ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ರಾಹುಲ್ ಗಾಂಧಿ ಅವರು ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕರ್ನಾಟಕ, ‘ನಿಮ್ಮ ಮುಖ್ಯಮಂತ್ರಿ’ ಎಚ್.ಡಿ. ಕುಮಾರಸ್ವಾಮಿ ಅದೇ ಕೆಲಸವನ್ನು ಕರ್ನಾಟಕದಲ್ಲೂ ಮಾಡುತ್ತಿಲ್ಲವೇ? ಎಂದು ಕಾಲೆಳೆದಿದೆ.

‘ನಿಮ್ಮ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪತ್ರಕರ್ತರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿ, ನಿಂದನೆ ಮಾಡುತ್ತಿದ್ದಾರೆ. ಟಿಪ್ಪುವಿನ ದೌರ್ಜನ್ಯದ ಕುರಿತು ಮಾತನಾಡಿದ ಪತ್ರಕರ್ತ ಸಂತೋಷ್ ತಮ್ಮಯ್ಯಅವರನ್ನು ಬಂಧಿಸಲಾಗಿತ್ತು. ಮುಖ್ಯಮಂತ್ರಿ ಪುತ್ರನ ನಡವಳಿಕೆ ಬಗ್ಗೆ ವರದಿ ಮಾಡಿದ್ದಕ್ಕೆ ವಿಶ್ವೇಶ್ವರ ಭಟ್ ವಿರುದ್ಧಎಫ್ಐಆರ್ ದಾಖಲಿಸಲಾಗಿದೆ. ಇದು ನಿಮ್ಮ ಆಷಾಢಭೂತಿತನವನ್ನು ತೋರಿಸುತ್ತದೆ’ ಎಂದು ಬಿಜೆಪಿ ಕರ್ನಾಟಕ ಘಟಕ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.