ನವದೆಹಲಿ: ಜಾತಿ ಗಣತಿ ಕುರಿತು ಹೇಳಿಕೆ ನೀಡಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ವಿರುದ್ಧ ಹರಿಹಾಯ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ‘ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಅವರ ಬಗ್ಗೆ ನಾವು ಯಾರೂ ಹೇಳಿಕೆ ನೀಡುತ್ತಿರಲಿಲ್ಲ. ಅವರು ಹಿರಿಯರು. ಆದರೆ, ಈಗಿನ ಸ್ವಾಮೀಜಿ ಅವರು ಅಯೋಧ್ಯೆಯಿಂದ ಹಿಡಿದು ಎಲ್ಲ ವಿಷಯಗಳ ಕುರಿತು ಹೇಳಿಕೆ ನೀಡುತ್ತಿದ್ದಾರೆ’ ಎಂದರು.

‘ಜಾತಿ ಗಣತಿ ಕುರಿತು ಮಾತನಾಡುವ ಮೊದಲು ತಮ್ಮ ಮಠದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಲಿ. ಸ್ವಾಮೀಜಿ ಅವರು ಪಂಕ್ತಿಭೋಜನ ಹಾಗೂ ಮಡೆಸ್ನಾನಕ್ಕೆ ಉತ್ತೇಜನ ನೀಡುತ್ತಾರೆ. ಸ್ವಾಮೀಜಿಗಳು ಸರ್ವ ಸಂಘ ಪರಿತ್ಯಾಗಿಗಳು ಎಂಬ ಮಾತಿದೆ. ಆದರೆ, ಈಗ ಸ್ವಾಮೀಜಿಗಳು ಬದಲಾಗಿದ್ದಾರೆ’ ಎಂದು ಅವರು ಹೇಳಿದರು.

‘ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.