ಬೆಂಗಳೂರು: ಹೆಣ್ಣೂರು– ನಾಗವಾರ ಮಧ್ಯೆ ಮೆಟ್ರೊ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮಹಿಳೆ ಮತ್ತು ಗಂಡು ಮಗು ಮೃತಪಟ್ಟ ಪ್ರಕರಣ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳನ್ನು ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು, ‘ಬೆಂಗಳೂರಿನಲ್ಲಿ ಇದೇ 11 ಮತ್ತು 13ರಂದು ಪ್ರತ್ಯೇಕವಾಗಿ ಘಟಿಸಿರುವ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ‘ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಆದೇಶಿಸಿದೆ.

‘ಗುತ್ತಿಗೆ ನಡೆಸುತ್ತಿರುವ ಸಂಸ್ಥೆ ಅಥವಾ ಕಾಮಗಾರಿಯ ಮೇಲುಸ್ತುವಾರಿ ನಿಭಾಯಿಸುತ್ತಿರುವ ಅಧಿಕಾರಿಗಳ ಕುರಿತಾದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇಂತಹ ಕಾಮಗಾರಿ ನಡೆಸುವಾಗ ಯಾವ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ? ಸುರಕ್ಷತಾ ಕ್ರಮ ನಿರ್ವಹಿಸಲು ಹೊಣೆಗಾರಿಕೆ ನಿಗದಿ ಮಾಡಲಾಗಿದೆಯೇ’ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಂಬಂಧಿತ ಇಲಾಖೆಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮ (ಬಿಎಂಆರ್ಸಿಎಲ್), ಸಂಬಂಧಿತ ಗುತ್ತಿಗೆದಾರರನ್ನು ಪ್ರತಿವಾದಿಗಳನ್ನಾಗಿ ಮಾಡಲು ನಿರ್ದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.