ಬೆಂಗಳೂರು: 2024ರ ಏಪ್ರಿಲ್ ಅಂತ್ಯದೊಳಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 1,400 ವಿದ್ಯುತ್ ಚಾಲಿತ ಬಸ್‌ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಬಿಎಂಟಿಸಿಯ 100 ವಿದ್ಯುತ್ ಚಾಲಿತ ಬಸ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ನಿತ್ಯ 40 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಎಲ್ಲ ಜಾತಿ, ಧರ್ಮ, ಅಂತಸ್ತಿನ ಮಹಿಳೆಯರು ಇದರಲ್ಲಿ ಸೇರಿದ್ದಾರೆ ಎಂದರು.

ಬಿಜೆಪಿಯವರು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾರೆ. ಆದರೆ, ಅವರು ಅಧಿಕಾರದಲ್ಲಿ ಇದ್ದಾಗ ಏಕೆ ಇಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಿಲ್ಲ? ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭವನ್ನು ಈವರೆಗೆ 4.30 ಕೋಟಿ ಜನರು ಪಡೆದಿದ್ದಾರೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದರು. ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ. ಸುಧಾಕರ್, ಡಾ.ಶರಣ ಪ್ರಕಾಶ ಪಾಟೀಲ, ಬಿ. ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಕೆ. ಗೋವಿಂದರಾಜ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.