ಬೆಂಗಳೂರು: ಪ್ರಯಾಣಿಕರಿಂದ ₹2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಬಾರದು ಎಂದು ತನ್ನ ಸಿಬ್ಬಂದಿಗೆ ಸೂಚಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸದ್ಯ ಅದನ್ನು ಹಿಂಪಡೆದಿದೆ.

'ಇನ್ನು ಮುಂದೆ ಎಲ್ಲ ಸಿಬ್ಬಂದಿಯೂ ₹2,000 ಮುಖಬೆಲೆಯ ನೋಟುಗಳನ್ನು ಪ್ರಯಾಣಿಕರಿಂದ ಸ್ವೀಕರಿಸಬೇಕೆಂದು ಸೂಚಿಸಲಾಗುತ್ತಿದೆ' ಎಂದು ಹೊಸದಾಗಿ ಸುತ್ತೋಲೆ ಹೊರಡಿಸಿದೆ.

₹2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮೇ 19ರಂದು ಘೋಷಿಸಿತ್ತು. ಆದರೆ, ₹2,000 ಮುಖಬೆಲೆಯ ನೋಟುಗಳು ಕಾನೂನುಬದ್ಧ ಮಾನ್ಯತೆ ಹೊಂದಿರುವುದಾಗಿಯೂ ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.