ಚಿಕ್ಕಬಳ್ಳಾಪುರ: ಕೋಲಾರ– ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದ್ದರೂ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಮಾತ್ರ ಇಲ್ಲಿಯವರೆಗೂ ಬಿಜೆಪಿಯ ಒಂದೇ ಒಂದು ಪ್ರಚಾರ ಸಭೆಯಲ್ಲಿಯೂ ಕಾಣಿಸಿಕೊಂಡಿಲ್ಲ!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಕೀರ್ತಿ ಬಚ್ಚೇಗೌಡ ಅವರಿಗೆ ಸಲ್ಲುತ್ತದೆ. ಹೊಸಕೋಟೆಯ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರವಷ್ಟೇ ಅಲ್ಲನೆರೆಯ ಕೋಲಾರ ಜಿಲ್ಲೆಯಲ್ಲಿಯೂ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಹೀಗಿದ್ದರೂ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳಿಂದ ದೂರವಿರುವುದುನಾನಾ ರೀತಿಯ ಚರ್ಚೆ ಹುಟ್ಟು ಹಾಕಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗಲೂ ಬಚ್ಚೇಗೌಡ ಕಾಣಿಸಿಕೊಳ್ಳಲಿಲ್ಲ. ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದರೂ ಹಾನಿಯಾದ ಪ್ರದೇಶಗಳಿಗೆ ಒಮ್ಮೆಯೂ ಭೇಟಿ ನೀಡಿಲ್ಲ.

ಗೌಡರ ಪುತ್ರ ಶರತ್ ಬಚ್ಚೇಗೌಡ ಅವರು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಈಗ ಕಾಂಗ್ರೆಸ್ ಸೇರಿದ್ದಾರೆ. ತಮ್ಮ ತಂದೆಯ ರಾಜಕೀಯ ನಿರ್ಧಾರಗಳಲ್ಲಿ ಅವರು ಪ್ರಮುಖ ಪಾತ್ರವಹಿಸುತ್ತಿದ್ದಾರೆ.

ಚುನಾವಣೆ ಹತ್ತಿರದಲ್ಲಿದ್ದರೂ ಬಚ್ಚೇಗೌಡರ ನಡೆ ಇನ್ನೂ ನಿಗೂಢವಾಗಿದೆ. ಅವರು ಯಾರನ್ನು ಬೆಂಬಲಿಸುತ್ತಾರೆ ಎಂಬ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲೇ ಗೊಂದಲ ಕಾಣುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.