ಬೆಂಗಳೂರು: ‘ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಬಾಂಬೆ ಜಯಶ್ರೀ ರಾಮನಾಥ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ’ ಎಂದು ಅವರ ಕುಟುಂಬದವರು ಸೋಮವಾರ ಹೇಳಿದ್ದಾರೆ.

‘ರಕ್ತನಾಳ ಊತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಚಿಕಿತ್ಸೆಗಾಗಿ ಬ್ರಿಟನ್ನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ನುರಿತ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡಿದ್ದು, ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿತ್ತು. ಹೀಗಾಗಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ತಿಳಿಸಿದ್ದಾರೆ.

‘ಅಮ್ಮನಿಗೆ ಬ್ರಿಟನ್ನಲ್ಲಿ ಅತ್ಯಾಧುನಿಕ ಚಿಕಿತ್ಸೆ ದೊರೆತಿದೆ. ಸದ್ಯ ಸಂಬಂಧಿಕರೊಬ್ಬರ ಮನೆಯಲ್ಲಿ ಇರುವ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಜಗತ್ತಿನ ವಿವಿಧೆಡೆ ಇರುವ ಅವರ ಅಭಿಮಾನಿಗಳು ಬೇಗನೆ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿದ್ದಾರೆ. ಅವರಿಗೆಲ್ಲಾ ನಾವು ಆಭಾರಿಯಾಗಿದ್ದೇವೆ’ ಎಂದು ಜಯಶ್ರೀ ಅವರ ಮಗ ಅಮೃತ್ ರಾಮನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಷ್ಟದ ಸಮಯದಲ್ಲಿ ಬ್ರಿಟನ್ನ ಜನ ನಮಗೆ ಬೆಂಬಲವಾಗಿ ನಿಂತರು. ಹೀಗಾಗಿ ಸಂದಿಗ್ಧ ಪರಿಸ್ಥಿತಿಯಿಂದ ಹೊರ ಬರಲು ಸಾಧ್ಯವಾಗಿದೆ. ಅವರಿಗೂ ನಾವು ಕೃತಜ್ಞರಾಗಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.