ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿ. ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಉದ್ಯಮಿ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಸಮವಸ್ತ್ರದ ವಿಷಯ ಈಗಾಗಲೇ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಬೇರೆ ಬೇರೆ ವಿಷಯಗಳ ಬಗ್ಗೆ ತಮ್ಮ ತಮ್ಮ ನಂಬಿಕೆಗಳ ಆಧಾರದ ಮೇಲೆ ಇಷ್ಟು ವರ್ಷ ನಾವೆಲ್ಲರೂ ಬದುಕು ನಡೆಸುತ್ತಿದ್ದೇವೆ. ಕರ್ನಾಟಕ ರಾಜ್ಯ ಶಾಂತಿಗೆ ಮತ್ತು ಪ್ರಗತಿಗೆ ಹೆಸರಾಗಿದೆ. ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲರೂ ಸಂಯಮ ವಹಿಸಬೇಕು. ಸಾಮಾಜಿಕವಾಗಿ ಹಲವಾರು ಸಮಸ್ಯೆಗಳು ಉದ್ಭವವಾಗುವ ಸಂದರ್ಭದಲ್ಲಿ ಕೂತು ಚರ್ಚೆ ಮಾಡಿ ಬಗೆಹರಿಸಲು ಸಾಧ್ಯವಿದೆ. ಆದ್ದರಿಂದ ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದರು.

ಇದನ್ನೂ ಓದಿ |ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಆಂಧ್ರ ಸಿಎಂ ಜತೆ ಮಾತುಕತೆ- ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.