ಮೈಸೂರು: ನಿವೇಶನಗಳಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ತಹಶೀಲ್ದಾರ್ ಶ್ರೀನಿವಾಸ್, ಎಸ್‌ಡಿಎ ರಂಗಣ್ಣ ಹಾಗೂ ಅಟೆಂಡರ್ ವರಲಕ್ಷ್ಮಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ನಗರದ ನಿವಾಸಿ ಕಾರ್ತಿಕ್ ಎಂಬುವರು 7 ನಿವೇಶನಗಳಿಗೆ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಆ ಕೆಲಸ ಮಾಡಿಕೊಡಲು ಪ್ರತಿ ನಿವೇಶನಕ್ಕೆ ₹ 2 ಸಾವಿರದಂತೆ ₹ 14 ಸಾವಿರ ಲಂಚಕ್ಕೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಅಟೆಂಡರ್ ವರಲಕ್ಷ್ಮಿ ಮೂಲಕ ತಹಶೀಲ್ದಾರ್ ಶ್ರೀನಿವಾಸ್ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

‘ಖಾತೆ ಮಾಡಿಕೊಡಲು 2 ವರ್ಷಗಳಿಂದ ಅಲೆಸುತ್ತಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಕಾರ್ತಿಕ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಕೃಷ್ಣ ಹಾಗೂ ಇನ್‌ಸ್ಪೆಕ್ಟರ್ ರೂಪಶ್ರೀ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.