ಬಂಟ್ವಾಳ: ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟುವಿನಲ್ಲಿ ನಡೆದಿದೆ.

ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿ ಗಾರ್(42) , ಕೇಸರಿ ( 39) ಮೃತಪಟ್ಟವರು.

ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು. ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.

ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್‌ಐ ಪ್ರಸನ್ನ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನೀಲಯ್ಯ ಅವರು ಈ ಹಿಂದೆ ಕೈ ಮಗ್ಗ ನಡೆಸುತ್ತಿದ್ದು, ಅನಾರೋಗ್ಯದಿಂದ ಅದನ್ನು ನಿಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.