ಬೆಂಗಳೂರು: 'ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ, ಅವರು ಯಾರಿಗೆ ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡುತ್ತಾರೆ" ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ನವರು ಅಭ್ಯರ್ಥಿ ಘೋಷಣೆ ಮಾಡುತ್ತಾರೆ ಎಂದಿದ್ದಾರೆ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

‘ನಮ್ಮ ಪಕ್ಷದಿಂದ ಈಗಾಗಲೇ ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ. ಜೆಡಿಎಸ್ನವರು ಅವರ ಅಭ್ಯರ್ಥಿಯನ್ನು ಘೋಷಿಸಿದ ಬಳಿಕ ಎರಡೂ ಪಕ್ಷಗಳು ಸೇರಿ ಮೂರೂ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಶ್ರಮ ಹಾಕುತ್ತೇವೆ’ ಎಂದು ಅವರು ಹೇಳಿದರು.

‘ಬಿಜೆಪಿಯವರು ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವ ಆಲೋಚನೆ ಇಲ್ಲ. ಸಿ.ಪಿ.ಯೋಗೇಶ್ವರ್ ಸ್ಪರ್ಧೆ ತೀರ್ಮಾನವನ್ನು ದೆಹಲಿಯವರು ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾನು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.