ಬೆಂಗಳೂರು:‘ದಿ ಕ್ಯಾರವಾನ್’ನಲ್ಲಿ ಪ್ರಕಟವಾಗಿರುವ ವರದಿಯಲ್ಲಿರುವ ಡೈರಿಯ ಪುಟಗಳು ಫೋರ್ಜರಿ. ಕೇಂದ್ರೀಯ ನೇರ ತೆರಿಗೆ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಕರ್ನಾಟಕ ಮತ್ತು ಗೋವಾ ವೃತ್ತದ ಆದಾಯ ತೆರಿಗೆ ಇಲಾಖೆ ಮುಖ್ಯ ಕಮಿಷನರ್ ಮತ್ತು ಮಹಾನಿರ್ದೇಶಕ (ತನಿಖೆ) ಬಿ.ಆರ್. ಬಾಲಕೃಷ್ಣನ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಆದಾಯ ತೆರಿಗೆ ಇಲಾಖೆ ಕೈಗೆತ್ತಿಕೊಂಡಿರುವ ತನಿಖೆಯೊಂದರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಇವುಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸಂಬಂಧಪಟ್ಟವರನ್ನು ಪ್ರಶ್ನಿಸಲಾಗಿದೆ ಎಂದೂ ಅವರು ವಿವರಿಸಿದರು.

‘ಈ ಹಾಳೆಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿ ಪರೀಕ್ಷೆ ಮಾಡಿಸಲಾಗಿದೆ. ಇದು ಮೂಲ ಡೈರಿಯದ್ದಲ್ಲ’ ಎಂದು ವರದಿ ತಿಳಿಸಿದೆ ಎಂದೂ ಬಾಲಕೃಷ್ಣನ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.