ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಜ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದುಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ನ 20-22 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಬಿಜೆಪಿ 20-23 ಸೀಟುಗಳನ್ನು ಗೆಲ್ಲಲಿದೆ ಎಂದು ಹಲವಾರು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಚುನಾವಣಾ ಪ್ರಚಾರ ಆರಂಭವಾದಂದಿನಿಂದ ಬಿಜೆಪಿ 22 ಸೀಟುಗಳನ್ನು ಸುಲಭವಾಗಿ ಗೆಲ್ಲುತ್ತದೆ ಎಂದು ನನಗನಿಸಿತ್ತು.ಕಾಂಗ್ರೆಸ್ ಮತ್ತು ಜೆಡಿಎಸ್ನ ಹಲವಾರು ಹಿರಿಯ ನಾಯಕರು ಈ ಚುನಾವಣೆಯಲ್ಲಿ ಪರಾಭವಗೊಳ್ಳಲಿದ್ದಾರೆ ಎಂದಿದ್ದಾರೆ ಯಡಿಯೂರಪ್ಪ.

ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್ಗೆ ಲಾಭವೇನೂ ಆಗಿಲ್ಲ ಎಂದು ಈಗಾಗಲೇ ಕಾಂಗ್ರೆಸ್ ನೇತಾರರು ಹೈಕಮಾಂಡ್ಗೆ ಹೇಳಿದ್ದಾರೆ. ಮೈತ್ರಿಕೂಟದಲ್ಲಿ ಎಲ್ಲರೂ ಬೇಸರವಾಗಿರುವುದಕ್ಕೆ ಇದೇ ಕಾರಣ.

ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ರಾಜಕೀಯದಲ್ಲಿ ತುಂಬಾ ಬದಲಾವಣೆಗಳಾಗಲಿವೆ. 20-22 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ.ಅವರು ಮೈತ್ರಿಕೂಟದ ಬಗ್ಗೆ ಖುಷಿಯಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.