ಕಲಬುರ್ಗಿ: ‘ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕಿತ್ತು’ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಹೇಳಿಕೆಗೆ ಬುಧವಾರ ಇಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ‘ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ನೀಡಿ ತಮ್ಮ ಕನಸು ನನಸಾಗಿಸಿಕೊಳ್ಳಲಿ’ ಎಂದು ಸವಾಲು ಹಾಕಿದರು.

‘ಇದುವರೆಗೂ ಚಿಂಚೋಳಿ ಕಡೆಗೆ ತಿರುಗಿಯೂ ನೋಡದ ಕುಮಾರಸ್ವಾಮಿ ಅವರು ಚಿಂಚೋಳಿಯನ್ನು ದತ್ತು ಪಡೆಯುತ್ತೇನೆ ಎಂದು ಹೇಳಿದ್ದಾರೆ. ಚುನಾವಣೆ ಕಾರಣಕ್ಕಾಗಿ ಏನೇನೋ ಭರವಸೆ ಕೊಟ್ಟು ಹೋಗಿದ್ದಾರೆ’ ಎಂದರು.

ಸರ್ಕಾರ ರಚನೆಗೆ ಮುಂದಡಿ: ‘ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಹಾಗಂತ ನಾವೇನೂ ಸನ್ಯಾಸಿಗಳಲ್ಲ. ಒಂದು ವೇಳೆ ಸರ್ಕಾರ ಬಿದ್ದರೆ ಹೊಸ ಸರ್ಕಾರ ರಚನೆಯ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಸರ್ಕಾರದ ಪತನಕ್ಕೆ ನಾವು ಕೈ ಹಾಕುವುದಿಲ್ಲ’ ಎಂದರು.

ಬಾಲಿಶ ಹೇಳಿಕೆ:ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕಿತ್ತು ಎಂಬುದು ಬಾಲಿಶ ಹೇಳಿಕೆ ಮತ್ತು ಚುನಾವಣೆ ಗಿಮಿಕ್. ಖರ್ಗೆ ಮತ್ತು ಸಿದ್ದರಾಮಯ್ಯ ನಡುವೆ ಜಗಳ ಹಚ್ಚುವ ಯತ್ನ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.