ಬೆಂಗಳೂರು: ರಾಜ್ಯ ಸರ್ಕಾರ ಹೊಸದಾಗಿ ಮಂಜೂರಾತಿ ನೀಡಿರುವ 37 ನರ್ಸಿಂಗ್ ಕಾಲೇಜುಗಳ 1,315 ಸೀಟುಗಳನ್ನು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಿದೆ.

ಅಸಕ್ತರು ಇದೇ 28ರಿಂದ 29ರ ಮಧ್ಯಾಹ್ನ 12 ಗಂಟೆವರೆಗೆ ಆಪ್ಷನ್ಸ್ ದಾಖಲಿಸಬಹುದು. ಅದೇ ದಿನ ಸಂಜೆ 6ಕ್ಕೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

‘ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಅ.30ರ ಒಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು. ಹೊಸ 37 ಕಾಲೇಜುಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈ ಕಾಲೇಜುಗಳಿಗೆ ಮಾತ್ರ ಆಪ್ಷನ್ಸ್ ದಾಖಲಿಸಬಹುದು’ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.