ತುಮಕೂರು:ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ರಂಗಾಪುರ ಬಳಿ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವಲ್ಸ್ ಖಾಸಗಿ ಬಸ್ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಲಾರಿ ಕ್ಲೀನರ್ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹದಿಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಲಾರಿ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ಸರ್ವೀಸ್ ರಸ್ತೆಗೆ ಉರುಳಿ ಬಿದ್ದಿದೆ. ಚಾಲಕ ಪರಾರಿಯಾಗಿದ್ದಾನೆ. ಮೃತರ ವಿವರ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಉರುಳಿ ಬಿದ್ದಿದ್ದೇ ತಡ, ಲಾರಿಯಲ್ಲಿದ್ದ ಸೋಪಿನ ಬಾಕ್ಸ್‌ಗಳನ್ನು ಕೊಂಡೊಯ್ಯಲು ಜನರು ಮುಗಿಬಿದ್ದರು. ಬಸ್‌ನಲ್ಲಿ ಪ್ರಯಾಣಿಕರು ಗಾಯಗೊಂಡು ಚೀರುತ್ತಿದ್ದರೂ ಸಹ ಕಣ್ಣೆತ್ತಿಯೂ ನೋಡಲಿಲ್ಲ. ಕಣ್ಣಮುಂದೆಯೇ ಸೋಪಿನ ಬಾಕ್ಸ್‌ಗಳು ನಾಪತ್ತೆಯಾಗುತ್ತಿದ್ದರೂ ಪೊಲೀಸರು ಅಸಹಾಯಕರಾಗಿ ನಿಂತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ತುಮಕೂರು ಗ್ರಾಮಾಂತರ ಸಿಪಿಐ ರಾಮಕೃಷ್ಣಪ್ಪ, ಪಿಎಸ್ಐ ಲಕ್ಷ್ಮಯ್ಯ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.