ಬೆಂಗಳೂರು: ಕೆಎಸ್ಆರ್ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್ ಪ್ರಯಾಣ ದರ ಏರಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.

ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಶ್ರೀನಿವಾಸ್ ಪ್ರಸ್ತಾವ ಸಲ್ಲಿಸಲಾಗು ವುದು ಎಂದು ಹೇಳಿದ್ದಾರೆ. ಇನ್ನೂ ಪ್ರಸ್ತಾವ ಬಂದಿಲ್ಲ. ಟಿಕೆಟ್ ದರ ಏರಿಸುವ ಚಿಂತನೆ ನಡೆಸಿಲ್ಲ’ ಎಂದು ಹೇಳಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಿಸಲು ಚಿಂತನೆ ನಡೆದಿದೆ ಎಂದು ಶ್ರೀನಿವಾಸ್ ಶನಿವಾರವಷ್ಟೇ ಸುಳಿವು ನೀಡಿದ್ದರು.

ಗುಬ್ಬಿ ತಾಲ್ಲೂಕಿನ ಮಣ್ಣೆಮ್ಮ ದೇವಸ್ಥಾನದಲ್ಲಿ ಶನಿವಾರ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರ
ರೊಂದಿಗೆ ಮಾತನಾಡಿದ
ಅವರು, ಇಂಧನ ದರ, ವಾಹನ ಬಿಡಿ ಭಾಗಗಳ ಬೆಲೆ ಏರಿಕೆ
ಹಾಗೂ ಸಿಬ್ಬಂದಿ ವೇತನ ವೆಚ್ಚದಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟ ಅನುಭವಿಸುತ್ತಿದೆ. ಈ ನಷ್ಟ ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.