ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವಿ ಕ್ಷೇತ್ರದ ಟಿಕೆಟ್ ಅನ್ನು ಮುಸ್ಲಿಂ ಅಭ್ಯರ್ಥಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ರಾಜ್ಯಕ್ಕೆ ಬಂದಿರುವ ಸುರ್ಜೇವಾಲ ಅವರ ಜೊತೆ ಚರ್ಚೆ ನಡೆಸಿದ ಜಮೀರ್ ಅಹಮದ್ ಖಾನ್, ‘ಕಳೆದ ವಿಧಾನ ಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಂತಿದೆ. ಹೀಗಾಗಿ, ಶಿಗ್ಗಾವಿ ಟಿಕೆಟ್ನ್ನು ಮುಸ್ಲಿಂ ಸಮುದಾಯಕ್ಕೆ ನೀಡಲೇಬೇಕು’ ಎಂದು ಪಟ್ಟು ಹಿಡಿದರು.

ಜಮೀರ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಇದೇ ಬೇಡಿಕೆ ಇಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.