ಬೆಂಗಳೂರು: ‘ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿ ಎನ್ನುವುದನ್ನು ನಿರೂಪಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ‘ಎಕ್ಸ್’ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ‘ಈ ತೀರ್ಪು ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ’ ಎಂದಿದ್ದಾರೆ.

‘ಅಕ್ರಮವಾಗಿ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಅವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ’ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.