ಬೆಂಗಳೂರು: ‘ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆಯಾಗಲಿ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರೋಪಿಸಿದ್ದಾರೆ.

ಮುಡಾ ಕಡತಗಳನ್ನು ಭೈರತಿ ಸುರೇಶ್ ಅವರು ಸುಟ್ಟುಹಾಕಿದ್ದಾರೆ ಎಂದು ಶೋಭಾ ಅವರು ಶನಿವಾರ ಆರೋಪದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಸುರೇಶ್ ಅವರು, ‘ಯಡಿಯೂರಪ್ಪ ಒಳ್ಳೆಯವರು. ಆದರೆ ಮೈತ್ರಾದೇವಿ ಅವರ ಸಾವು ಹೇಗಾಯಿತು. ಈ ಬಗ್ಗೆ ಗೃಹ ಸಚಿವರು, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿ’ ಎಂದರು.

‘ಒಬ್ಬ ಕೇಂದ್ರ ಸಚಿವೆಯಾಗಿ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ. ಅವರನ್ನೂ ಬಂಧಿಸಿ, ತನಿಖೆ ನಡೆಸಿದರೆ ಯಡಿಯೂರಪ್ಪ ಅವರ ಪತ್ನಿಯ ಸಾವು ಹೇಗಾಯಿತು ಎಂಬುದು ಗೊತ್ತಾಗುತ್ತದೆ ಎಂದು ನಾನು ಒತ್ತಾಯಿಸಿದರೆ, ಶೋಭಾ ಅದನ್ನು ಒಪ್ಪುತ್ತಾರೆಯೇ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.