ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ವಿಜ್ಞಾನ ವಸ್ತುಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಸಿವಿ ರಾಮನ್ ಅವರಿಗೆ ನೊಬೆಲ್ ಪಾರಿತೋಷಕ ತಂದುಕೊಟ್ಟ ರಾಮನ್ ಎಫೆಕ್ಟ್ ನೆನಪಲ್ಲಿ ಮಕ್ಕಳಿಗಾಗಿ ವಿಜ್ಞಾನ ಲೋಕವನ್ನೇ ತೆರೆದಿಡಲಾಗಿತ್ತು. ರಾಜ್ಯದ ವಿವಿಧ ಕಡೆಗಳಿಂದ 20 ಶಾಲೆಗಳ 800 ಮಕ್ಕಳಿಗೆ ಈ ವಸ್ತುಪ್ರದರ್ಶನದಲ್ಲಿ ಭಾಗಿಯಾಗಲು ಮತ್ತು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.