ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಆಗುವ ಸಾಧ್ಯತೆ ಇನ್ನಷ್ಟು ದೂರವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳೂ ಸೇರಿ ಎಲ್ಲ ರೀತಿಯ ಚುನಾವಣೆಗಳಿಗೂ ಸಿದ್ಧತೆ ಮಾಡಿಕೊಳ್ಳಲು ಗಮನಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ.

ಬೊಮ್ಮಾಯಿ ನವದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆಯ ವಿಷಯವನ್ನು ಪ್ರಸ್ತಾಪಿಸಿದರು. ಆದರೆ ಅವರು ಈ ವಿಷಯಕ್ಕೆ ಹೆಚ್ಚು ಗಮನ ನೀಡಲಿಲ್ಲ ಎಂದು ಮೂಲಗಳು ಹೇಳಿವೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಸದ್ಯವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಾಗಿರುವುದರಿಂದ ಆ ಬಗ್ಗೆ ಗಮನ ಹರಿಸುವಂತೆ ಅಮಿತ್ ಶಾ ಅವರು ಸೂಚಿಸಿದ್ದು, ‘ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ಚಿಂತೆ ಬಿಡಿ’ ಎಂದು ಬೊಮ್ಮಾಯಿ ಅವರಿಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.