ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗದ ಬಳಿ ಕಾರು-ಲಾರಿ ಅಪಘಾತ: ಮೂರು ತಿಂಗಳ ಶಿಶು‌ ಸೇರಿ ಬೆಂಗಳೂರಿನ ಮೂವರ ಸಾವು

ಸ್ಥಳದಲ್ಲಿಯೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.
Published : 12 ಜೂನ್ 2023, 6:48 IST
Last Updated : 12 ಜೂನ್ 2023, 6:48 IST
ಫಾಲೋ ಮಾಡಿ
Comments

ಚಿತ್ರದುರ್ಗ: ತಾಲ್ಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ತಿಂಗಳ ಶಿಶು ಸೇರಿ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆ ನಿವಾಸಿಗಳಾದ ಜಾಕೀರ್ ಅಹಮ್ಮದ್ (60), ತಬಸೂಮ್ (28) ಹಾಗೂ ಮೂರು ತಿಂಗಳ ಹಯಾತ್ ಫಾತಿಮಾ ಮೃತಪಟ್ಟವರು. ನಯಾಜ್ (22), ಇಮ್ರಾನ್ ಖಾನ್ (32), ತಬ್ರೀಜ್ ಅಹಮ್ಮದ್ (27), ಸಬಾ (26) ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಸ್ಥಳದಲ್ಲಿಯೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT