ಮೈಸೂರು: ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬುಧವಾರ ಇಲ್ಲಿ ತಿಳಿಸಿದರು.

ಶಾಸಕರು, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಸೇರಿದಂತೆ ಈ ಸಮುದಾಯದ ಹಲವರು ನನಗೆ ಮನವಿ ಮಾಡಿದ್ದರು. ಹೀಗಾಗಿ, ಕಂದಾಯ ಇಲಾಖೆ ಈ ತೀರ್ಮಾನ ಕೈಗೊಂಡಿದೆ. ಇನ್ನುಮುಂದೆ ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಜಾತಿ ಪ್ರಮಾಣಪತ್ರ ಸಿಗಲಿದೆ ಎಂದರು.

ರಾಜ್ಯದ ಜನಸಂಖ್ಯೆಯಲ್ಲಿ ಶೇ 3ರಷ್ಟು ಬ್ರಾಹ್ಮಣರಿದ್ದು, ಸ್ವಾತಂತ್ರ್ಯ ಬಂದಾಗಿನಿಂದ ಈ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಸಿಕ್ಕಿರಲಿಲ್ಲ. ಪ್ರಮಾಣಪತ್ರವಿಲ್ಲದೇ ಶಾಲಾ ಕಾಲೇಜು, ನಿಗಮ ಹಾಗೂ ಇತರ ಕ್ಷೇತ್ರಗಳಲ್ಲಿ ಸೌಲಭ್ಯ ಪಡೆಯಲು ಬ್ರಾಹ್ಮಣರಿಗೆ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.